ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆ ಈ ಹೊಸ ಘೋಷಣೆ ಮಾಡಲಾಗಿದೆ.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದ್ದರು. ಹಾಗೂ ನೈನಾರ್ ನಾಗೇಂದ್ರನ್ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷರ ನೇಮಕದ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!