Friday, August 12, 2022

Latest Posts

ಲಾಕ್ ಡೌನ್ ನಡುವೆಯೂ ನಂಜನಗೂಡಿಗೆ ಹರಿದು ಬಂತು ಜನಸಾಗರ: ಒಂದು ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಮೂರನೇ ಅಲೆಯ ಭೀತಿ ನಡುವೆಯೂ ಮೈಸೂರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಕ್ತರ ದಂಡು ಹರಿದುಬರುತ್ತಿದ್ದು, ಒಂದೇ ತಿಂಗಳಿನಲ್ಲಿ ಬರೋಬ್ಬರಿ 1,29,73,194 ರೂ. ಕಾಣಿಕೆ ಸಂಗ್ರಹವಾಗಿದೆ.
ಒಂದು ತಿಂಗಳಿನಲ್ಲಿ ಹುಂಡಿ ಭರ್ತಿಯಾಗಿದ್ದು, ದೇವಸ್ಥಾನದ ಸಿಬ್ಬಂದಿ ಹುಂಡಿಯಲ್ಲಿರುವ ಹಣ ಹಾಗೂ ಚಿನ್ನಾಭರಣ ಎಣಿಕೆ ಮಾಡಿದ್ದಾರೆ. ಈ ವೇಳೆ ನಂಜುಂಡೇಶ್ವರನಿಗೆ 50 ಗ್ರಾಂ. ಚಿನ್ನ, 8ಕೆ.ಜಿ. 200 ಗ್ರಾಂ. ಬೆಳ್ಳಿ ಹಾಗೂ 12 ವಿದೇಶಿ ಕರೆನ್ಸಿಗಳು ಸೇರಿ ಒಟ್ಟು 1,29,73,194 ರೂ. ಕಾಣಿಕೆ ಬಂದಿದೆ.
ದೇವಸ್ಥಾನಗಳು ಲಾಕ್ ಡೌನ್ ಬಳಿಕ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ ಬಳಿಕ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಂತೆಯೇ ಹುಂಡಿಯಲ್ಲಿನ ಕಾಣಿಕೆ ಕೂಡ ಹೆಚ್ಚಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss