ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಮಹಿಳೆಯ ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದ ದುಷ್ಕರ್ಮಿಗಳಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಡಿಯೋದಲ್ಲಿ ಹಸಿರು ಟೀಶರ್ಟ್ ಧರಿಸಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆದಿದ್ದ ಹೆರದಾಸ್ ಎಂಬಾತನನ್ನುಪೊಲೀಸರು ತೌಬಲ್‌ನಲ್ಲಿ ಬಂಧಿಸಿದ್ದಾರೆ.
ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದು, ಮಣಿಪುರ ಸಿಎಂ ಬಿರೇನ್ ಸಿಂಗ್‌ಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ, ಅಪರಾಧಿಗಳು ತಪ್ಪಿಸಿಕೊಳ್ಳೋದಕ್ಕೆ ಬಿಡೋದಿಲ್ಲ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.