ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಏಳನೇ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಇಡೀ ದೇಶವೇ ಹೊತ್ತಿ ಉರಿದ ಪ್ರಕರಣ ಇದಾಗಿದ್ದು, ಅತ್ಯಾಚಾರ ಕೊಲೆ ಪ್ರಕರಣಗಳು ದಾಖಲಾಗಿವೆ.
ಘಟನೆ ನಡೆದ 70 ದಿನಗಳ ನಂತರ ವಿಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ಇದೊಂದು ಹೇಯ ಕೃತ್ಯ, ಮನಸ್ಸು ದುಃಖ ಹಾಗೂ ಆವೇಶದಿಂದ ಕೂಡಿದೆ ಎಂದಿದ್ದರು.
ಇಡೀ ದೇಶವೇ ಆರೋಪಿಗಳಿಗೆ ಮರಣದಂಡನೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ನಡೆದ ಕೆಲ ಸಮಯದಲ್ಲೇ ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಇದೀಗ ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.