ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಎಸ್‌ಎಸ್ ಪ್ರಚಾರಕರು ಮತ್ತು ಹಿಂದಿನ ಸಹಸರಕಾರ್ಯವಾಹರಾಗಿ ಕಾರ್ ನಿರ್ವಹಿಸಿದ್ದ ಮದನ್ ದಾಸ್ ದೇವಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಇವರ ನಿಧನದ ಸುದ್ದಿ ʻಆಘಾತಕರʼ ಎಂದು ನಳಿನ್ ಕುಮಾರ್ ಕಟೀಲ್ ಭಾವುಕರಾದರು. ಅವರ ನಿಧನ ಅತ್ಯಂತ ನೋವು ತಂದಿದೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಮೃತರು ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿಯೂ ನಿಸ್ವಾರ್ಥ ಸೇವೆ ಸಲ್ಲಿಸಿದ್ದರು.