ಹೊಸದಿಗಂತ ವರದಿ ಬೆಂಗಳೂರು:
‘ದಿ ವೀಕ್’ ಮತ್ತು ‘ಮಲಯಾಳ ಮನೋರಮಾ’ದ ಸ್ಥಾನಿಕ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯವರಾದ ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಅವರ ಸಾವಿನಿಂದ ಮಾಧ್ಯಮ ಲೋಕಕ್ಕೆ ಭಾರೀ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ಈ ಆಘಾತ ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.