ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾರದಾ ಪಾಟೀಲರ ನಿಧನದ ವಿಚಾರ ಬೇಸರ ತಂದಿದೆ. ಅವರು ಆದರ್ಶ ಗೃಹಿಣಿಯಾಗಿದ್ದರು. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಮೃತರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.