ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ನಳಿನ್‍ಕುಮಾರ್ ಕಟೀಲ್ ಅಭಿನಂದನೆ

ಹೊಸದಿಗಂತ ವರದಿ, ಮಂಗಳೂರು
ದೆಹಲಿಯಲ್ಲಿ ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಕೋರಿದರು.
ಅಲ್ಲದೆ ಇದೇ ವೇಳೆ ನಳಿನ್ ಕುಮಾರ್ ಕಟೀಲ್ ಅವರು, ಡಾ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಲಾರ್ಮಣೆ ಮಾಡಿ ಮಾಡಿ ಗೌರವಿಸಿದರು.
ಶಿಕ್ಷಣ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳು ಸೇರಿದಂತೆ ವಿವಿಧ ರಂಗಗಳಲ್ಲಿ ಅಸಾಧಾರಣ ಸೇವೆ ಮಾಡುತ್ತಿರುವ ಹಾಗೂ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಡಾ. ವೀರೇಂದ್ರ ಹೆಗ್ಗಡೆ ಅವರ ಆಯ್ಕೆಯಿಂದ ಕನ್ನಡನಾಡಿಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಗೌರವ ಲಭಿಸಿದೆ ಎಂದು ಅವರು ಸಂಭ್ರಮ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!