ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ದೆಹಲಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭ ಪ್ರವೀಣ್ ನೆಟ್ಟಾರು ಅವರ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿರುವುದಕ್ಕೆಧನ್ಯವಾದ ಸಮರ್ಪಿಸಿದರು. ಅಲ್ಲದೆ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.

ಈ ಸಂದರ್ಭ ಗೃಹ ಸಚಿವರು ರಾಜ್ಯದಲ್ಲಿ ಎನ್ಐಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಕ್ರಮಗಳನ್ನು ನೀಡಲಾಗುವುದು ಮತ್ತು ಎನ್ಐಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!