ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯ ಸದನದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸದನದಲ್ಲಿ ಸದಾ ಗುಡುಗುವ ಯತ್ನಾಳ್ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕಟೀಲು ಈ ಸಂದರ್ಭ ಹಾರೈಸಿದರು. ಪಕ್ಷದ ಮುಖಂಡರು ಈ ಸಂದರ್ಭ ಜೊತೆಗಿದ್ದರು.