ಜಿ.ಟಿ.ದೇವೇಗೌಡರ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್‌, ಎಸ್.ಟಿ.ಸೋಮಶೇಖರ್ ಭೇಟಿ

ಹೊಸದಿಗಂತ ವರದಿ, ಮೈಸೂರು:
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೈಸೂರಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದರು.
ಮೊಮ್ಮಗಳು ಗೌರಿ ನಿಧನದಿಂದ ದುಃಖತಪ್ತರಾಗಿರುವ ಶಾಸಕ ಜಿ.ಟಿ.ದೇವೇಗೌಡ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ನಿರಂಜನ್, ಎನ್. ಮಹೇಶ್, ಮಾಜಿ ಸಚಿವ ವಿಜಯ್ ಶಂಕರ್, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!