ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಪಂದನಾ ಅವರ ಅಗಲುವಿಕೆ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ ಎಂದಿರುವ ಅವರು, ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ಮೃತರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ