May 23, 2026
Saturday, May 23, 2026
spot_img

ಲಕ್ನೋ ವಿಶ್ವವಿದ್ಯಾಲಯದಲ್ಲಿ ನಮಾಜ್ vs ಹನುಮಾನ್ ಚಾಲೀಸಾ ವಿವಾದ:13 ವಿದ್ಯಾರ್ಥಿಗಳಿಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋ ವಿಶ್ವವಿದ್ಯಾಲಯ ಆವರಣದಲ್ಲಿ ಧಾರ್ಮಿಕ ಆಚರಣೆ ಕುರಿತು ಉಂಟಾದ ವಿವಾದ ಉದ್ವಿಗ್ನತೆಗೆ ಕಾರಣವಾಗಿದೆ. ಕ್ಯಾಂಪಸ್‌ನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ನಮಾಜ್ ಮಾಡಿದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಹಿಂದು ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಲು ಮುಂದಾದರು. ಈ ಹಿನ್ನೆಲೆ ಪರಿಸ್ಥಿತಿ ತೀವ್ರಗೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿ ಸಾರ್ವಜನಿಕ ಶಾಂತಿ ಭಂಗ ಮಾಡಿದ ಆರೋಪದ ಮೇಲೆ 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಯಾಗಿದೆ. ಅವರಿಗೆ ತಲಾ 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿ ಸಲ್ಲಿಸುವಂತೆ ಸೂಚಿಸಲಾಗಿದೆ. ಒಂದು ವರ್ಷದ ಅವಧಿಗೆ ಶಾಂತಿ ಕಾಪಾಡುವ ಭರವಸೆ ನೀಡುವಂತೆ ಆಡಳಿತ ಕ್ರಮ ಕೈಗೊಂಡಿದೆ.

ಇದನ್ನೂ ಓದಿ:

ಇದಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಪ್ರಕರಣದ ಕುರಿತು ಪರಿಶೀಲನೆ ನಡೆಯುತ್ತಿದೆ. ಯಾವುದೇ ಪರಿಸ್ಥಿತಿಯಲ್ಲೂ ಕಾನೂನು ಸುವ್ಯವಸ್ಥೆ ಭಂಗವಾಗಲು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !