ದಿಗಂತ ವರದಿ ಕೊಪ್ಪಳ:
ರಾಜ್ಯದಲ್ಲಿ ಹೆಸರು ಬೆಳೆ ಉತ್ತಮವಾಗಿ ಬಂದಿದೆ. ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಸಾಪುರ ಗ್ರಾಮದ ಲಘು ವಿಮಾನ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಹೆಸರು ಬೆಂಬಲ ಬೆಲೆಗೆ ಪತ್ರ ಬರೆಯಲಾಗಿದ್ದು, ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.