ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಸರು: ಕೇಜ್ರಿವಾಲ್​ ಪತ್ನಿ ವಿರುದ್ಧ ಸಮನ್ಸ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಸಂಕಷ್ಟ ಎದುರಾಗಿದ್ದು, ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್​ ನೀಡಿದೆ.

ಮೆಟ್ರೋಪಾಲಿಟನ್ ನ್ಯಾಯಾಧೀಶ ಅರ್ಜಿಂದರ್ ಕೌರ್ ಕೇಜ್ರಿವಾಲ್​ ಪತ್ನಿಗೆ ಸಮನ್ಸ್​ ಜಾರಿ ಮಾಡಿದ್ದಾರೆ.

ಬಿಜೆಪಿ ನಾಯಕ ಹರೀಶ್ ಖುರಾನಾ ಸುನಿತಾ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ (ಆರ್‌ಪಿ) ಕಾನೂನು ಉಲ್ಲಂಘಿಸಿರುವ ಆರೋಪ ಮಾಡಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಕೋರ್ಟ್​, ದೂರುದಾರರು ಮತ್ತು ಇತರ ಸಾಕ್ಷ್ಯವನ್ನು ಪರಿಗಣಿಸಿದ ನಂತರ ನವೆಂಬರ್ 18 ರಂದು ಸುನೀತಾ ಕೇಜ್ರಿವಾಲ್ ಅವರು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಸರು ನೋಂದಣಿ ಮಾಡಿದ್ದನ್ನು ತಪ್ಪು, ಕೇಸ್​ನಲ್ಲಿ ಇವರು ಆರೋಪಿ ಎಂದು ಘೋಷಿಸಿತ್ತು. ಪ್ರಜಾಪ್ರತಿನಿಧಿ ಕಾಯ್ದೆಯ (ಆರ್‌ಪಿ) ನಿಬಂಧನೆಗಳನ್ನು ಅವರು ಉಲ್ಲಂಘಿಸಿದ್ದಾರೆ ಎಂದು ಕೋರ್ಟ್​ ಹೇಳಿತ್ತು. ಜನಪ್ರತಿನಿಧಿ ಕಾಯಿದೆ 1950ರ ಪ್ರಕಾರ ಸಮನ್ಸ್ ನೀಡಬೇಕು ಎಂದು ನ್ಯಾಯಾಧೀಶರು ಆಗಸ್ಟ್ 29ರಂದು ಆದೇಶ ನೀಡಿದ್ದರು.

ಪ್ರಜಾಪ್ರತಿನಿಧಿ ಕಾಯ್ದೆ-1950 ಸೆಕ್ಷನ್​ 17 ರ ಪ್ರಕಾರ, ಯಾವುದೇ ಮತದಾರ ಒಂದು ಕ್ಷೇತ್ರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾನ ಪಟ್ಟಿಯಲ್ಲಿ ಹೆಸರು ಹೊಂದುವಂತಿಲ್ಲ ಎಂಬ ನಿಯಮವಿದೆ. ಕೇಜ್ರಿವಾಲ್​ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರ (ಉತ್ತರಪ್ರದೇಶ) ಮತ್ತು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದು ಸೆಕ್ಷನ್ 17 ರ ಉಲ್ಲಂಘನೆಯಾಗಿದ್ದು, ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಆರ್​​ಪಿ ಕಾಯಿದೆಯ ಸೆಕ್ಷನ್ 31 ರ ಅಡಿಯಲ್ಲಿ ಈ ಅಪರಾಧಕ್ಕಾಗಿ 2 ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಬಹುದಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!