ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ಚುನಾವಣಾ ಆಯೋಗವು ಗುಜರಾತ್ ರಾಜ್ಯದಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವೇಗ ಹೆಚ್ಚಿಸಿದ್ದಾರೆ. ಈಗಾಗಲೇ ಗುಜರಾತ್ ನಲ್ಲಿ ವ್ಯಾಪಕ ಪ್ರವಾಸ ಮಾಡುತ್ತಿರುವ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಇಂದು (ಶುಕ್ರವಾರ) ಪ್ರಕಟಿಸಲಿದ್ದಾರೆ ಎಂದು ಪಕ್ಷದ ಕಚೇರಿಯ ಮೂಲಗಳು ತಿಳಿಸಿವೆ. ರಾಜ್ಯದ ಬಹುಪಾಲು ಜನರ ಅಭಿಪ್ರಾಯ ಸಂಗ್ರಹಿಸಿರುವ ಪಕ್ಷ, ಜನರ ಇಚ್ಛೆಯಂತೆ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ.
ಪಕ್ಷದ ಮೂಲಗಳ ಪ್ರಕಾರ, ಎಎಪಿಯಿಂದ ಉನ್ನತ ಹುದ್ದೆಗೆ ರೇಸ್‌ನಲ್ಲಿರುವವರಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ಗೋಪಾಲ್ ಇಟಾಲಿಯಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ಸೇರಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಲು ಕೇಜ್ರಿವಾಲ್ ಶುಕ್ರವಾರ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ತಮ್ಮ ಅಭಿಪ್ರಾಯ ಕಳೆದ ವಾರ, ಕೇಜ್ರಿವಾಲ್ ಅವರು ಎಸ್‌ಎಂಎಸ್, ವಾಟ್ಸಾಪ್, ವಾಯ್ಸ್‌ಮೇಲ್ ಮತ್ತು ಇ-ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸಲು ಜನರಿಗೆ ಹೇಳಿದರು.
ಗುಜರಾತ್ ಚುನಾವಣೆಗೆ 10 ಅಭ್ಯರ್ಥಿಗಳ ಒಂಭತ್ತನೇ ಪಟ್ಟಿಯನ್ನು ಆಪ್ ಗುರುವಾರ ಪ್ರಕಟಿಸಿದೆ. ಈವರೆಗೆ ಘೋಷಣೆಯಾಗಿರುವ ಅಭ್ಯರ್ಥಿಗಳ ಸಂಖ್ಯೆ 118ಕ್ಕೆ ತಲುಪಿದೆ. ಗುಜರಾತ್ ರಾಜ್ಯದಲ್ಲಿ 182 ವಿಧಾನಸಭಾ ಕ್ಷೇತ್ರಗಳಿವೆ. ಮುಂದಿನ ತಿಂಗಳು (ಡಿಸೆಂಬರ್ 1 ಮತ್ತು 5) ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.