ಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ: ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸುವಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸ್ಪಷ್ಟಪಡಿಸಿದೆ.

ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಬೋರ್ಡ್‌ಗಳಲ್ಲಿ ಪ್ರದರ್ಶಿಸಲು ನಿರ್ದೇಶಿಸಲಾಗಿದೆ ಎಂದು ಉಜ್ಜಯಿನಿ ಮೇಯರ್ ಹೇಳಿದ ಕೆಲವು ದಿನಗಳ ನಂತರ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ (UDHD) ಈ ಹೇಳಿಕೆ ಬಿಡುಗಡೆ ಮಾಡಿದೆ.

ನಗರ ಪ್ರದೇಶಗಳಲ್ಲಿನ ಕನ್ವರ್ ಯಾತ್ರಾ ಮಾರ್ಗಗಳಲ್ಲಿನ ಅಂಗಡಿ ಮಾಲೀಕರು ತಮ್ಮ ಹೆಸರಿನ ಬೋರ್ಡ್‌ ಅಳವಡಿಸುವಂತೆ ರಾಜ್ಯ ಸರ್ಕಾರ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಯುಡಿಎಚ್‌ಡಿ ಸ್ಟಷ್ಟಪಡಿಸಿದೆ.

ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಅವರು ಕಳೆದ ವಾರ, ಎರಡು ವರ್ಷಗಳ ಹಿಂದಿನ ಮೇಯರ್-ಇನ್-ಕೌನ್ಸಿಲ್‌ನ ನಿರ್ಧಾರವನ್ನು ಉಲ್ಲೇಖಿಸಿ, ಅಂಗಡಿಯ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಪ್ರಸ್ತಾಪವನ್ನು ಅನುಮೋದಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕಯನ್ನು ಖಂಡಿಸಿದ ಯುಡಿಎಚ್‌ಡಿ, ಕನ್ವರ್ ಯಾತ್ರೆಗೆ ಸಂಬಂಧಿಸಿದ ಹರಡಿಸುವ ಈ ಗೊಂದಲಗಳನ್ನು ಬಗೆಹರಿಸುವಂತೆ ನಗರ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ಕೂಡ ನಗರದ ಅಂಗಡಿ ಫಲಕಗಳಲ್ಲಿ ಹೆಸರು ಮತ್ತು ಫೋನ್ ಸಂಖ್ಯೆಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಿಂದ ತಡೆ
ಈ ಮಧ್ಯೆ ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!