Sunday, December 10, 2023

Latest Posts

ರಾಮನಗರವನ್ನು ಬೆಂಗಳೂರು ಬದಲು ಡೆಲ್ಲಿ ಎಂದು ಹೆಸರಿಡಿ, ಯಾರು ಬೇಡ ಅಂದವರು?: ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರ ಜಿಲ್ಲೆಯ ಹೆಸರು ಬದಲಿಸುವ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಮನಗರವನ್ನು ಬೆಂಗಳೂರು ಬದಲು ಡೆಲ್ಲಿ ಎಂದು ಹೆಸರಿಡಿ.ಯಾರು ಬೇಡ ಅಂದವರು? ಎಂದು ಪ್ರಶ್ನಿಸಿದ್ದಾರೆ.

ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಮನಗರವನ್ನು ಡೆಲ್ಲಿ ಎಂದು ಹೆಸರಿಡಲಿ. ಆಗ ವಿಶ್ವಮಟ್ಟದಲ್ಲಿ ಹೆಸರಾಗುತ್ತಲ್ಲ. ಸ್ವಲ್ಪ ಮಳೆಯಾದರೂ ಸಾಕು ಎಂತಹ ಗ್ರೇಟರ್ ಬೆಂಗಳೂರು ಮಾಡಿದ್ದಾರೆ ಎಂದು ಗೊತ್ತಾಗುತ್ತಿದೆ. ಹೆಸರು ಬದಲಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಟಾಂಗ್ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!