ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಕೋಟಿ ರೂ. ವಂಚಿಸಿದ ಖತರ್ನಾಕ್‌ ಲೇಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಖತರ್ನಾಕ್ ಮಹಿಳೆಯೊಬ್ಬಳು ಅಮಾಯಕ ಜನರಿಗೆ ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು ಅಮಾಯಕರಿಂದ ಕೋಟಿ ರೂ. ಹಣ ಪಡೆದು ಟೋಪಿ ಹಾಕಿದ್ದಾಳೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಈ ಪ್ರಕರಣದ ಆರೋಪಿ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಮುಗ್ಧ ಜನರನ್ನು ಮೋಸಗೊಳಿಸುವುದೇ ಈಕೆ ತನ್ನ ಕಸುಬಾಗಿ ಮಾಡಿಕೊಂಡಿದ್ದಾಳೆ.

ಸೂರ್ಯನಗರದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ಪ್ರಕರಣ ದಾಖಲಾಗಿದೆ. ವಂಚಕಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!