ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮಾಡುತ್ತಿರುವುದರಿಂದ ಸಾಕಷ್ಟು ಅನುಕೂಲವಾದಂತೆ ತೋರುತ್ತಿದೆ. ನಕಲಿ ಮತದಾರರು ಒಬ್ಬೊಬ್ಬರೇ ಹೊರಗೆ ಬೀಳುತ್ತಿದ್ದಾರೆ. ಬಿಹಾರದ ಮತದಾರರ ಪಟ್ಟಿಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಹೆಸರಿರುವುದು ಪತ್ತೆಯಾಗಿದೆ.
1956 ರಲ್ಲಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಇಬ್ಬರು ಮಹಿಳೆಯರನ್ನು ಬಿಹಾರದಲ್ಲಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದಲ್ಲಿ ಅವರ ಹೆಸರುಗಳನ್ನು ಪರಿಶೀಲಿಸಲಾಗಿದೆ.
ವೀಸಾ ಅವಧಿ ಮುಗಿದ ನಂತರವೂ ವಿದೇಶಿಯರು ಇಲ್ಲಿ ನೆಲೆಸಿರುವ ಬಗ್ಗೆ ಗೃಹ ಸಚಿವಾಲಯ ನಡೆಸಿದ ತನಿಖೆಯ ಸಂದರ್ಭದಲ್ಲಿ ಅವರ ಹೆಸರುಗಳು ಬೆಳಕಿಗೆ ಬಂದಿವೆ. ಈ ಇಬ್ಬರು ಮಹಿಳೆಯರನ್ನು ಭಾಗಲ್ಪುರ ಜಿಲ್ಲೆಯಲ್ಲಿ ಗುರುತಿಸಲಾಗಿದೆ.