ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಯಾನ್ಸರ್‌ನಿಂದ ಬಳಲುತ್ತಿದ್ದ 82 ವರ್ಷದ ನಮೀಬಿಯಾದ ಅಧ್ಯಕ್ಷ ಹ್ಯಾಗೆ ಗೀಂಗೋಬ್ ಅವರು ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಸಾವಿನ ಕಾರಣವನ್ನು ಬಹಿರಂಗಪಡಿಸದಿದ್ದರೂ, ಕಳೆದ ತಿಂಗಳ ಕೊನೆಯಲ್ಲಿ ನಿಯಮಿತ ವೈದ್ಯಕೀಯ ತಪಾಸಣೆಯ ನಂತರ ಕ್ಯಾನ್ಸರ್ ಪತ್ತೆಯಾದ ನಂತರ ಚಿಕಿತ್ಸೆಗಾಗಿ ಯುನೈಟೆಡ್ ಸ್ಟೇಟ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗೀಂಗೋಬ್ ಅವರು ವಿಂಡ್‌ಹೋಕ್‌ನ ಲೇಡಿ ಪೊಹಂಬಾ ಆಸ್ಪತ್ರೆಯಲ್ಲಿ ನಿಧನರಾದರು. 2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾನು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಹೊರಬಂದಿದ್ದೇನೆ ಎಂದು ಸಾರ್ವಜನಿಕರಿಗೆ ಹೇಳಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು.