ಮೆಟ್ರೋ ಸೇವೆ ವ್ಯತ್ಯಯ: ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿ ಕಡೆಗೆ ಸಾಗುವ ಮೆಟ್ರೋ ಸಂಚಾರ ಬೆಳಗ್ಗೆ 7:30ರ ಸುಮಾರಿಗೆ ತಾಂತ್ರಿಕ ಕಾರಣದಿಂದಾಗಿ ಸ್ಥಗಿತಗೊಂಡಿದೆ. ಜನರು ಕೆಸಲಕ್ಕೆ ತೆರಳುವ ಸಮಯದಲ್ಲೇ ಮೆಟ್ರೋ ಕೆಟ್ಟು ನಿಂತಿದ್ದು, ಟ್ರೈನ್​ ಬಾರದೇ, ಸರಿಯಾದ ಸಮಯಕ್ಕೆ ಕಚೇರಿಗೆ ತಲುಪಲು ಸಾಧ್ಯವಾಗದೆ ಪ್ರಯಾಣಿಕರಿಗೆ ತೊಂದರೆಯಾಗಿದೆ.

ತಾಂತ್ರಿಕ ದೋಷ ಸರಿಪಡಿಸುವ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲೇ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!