ಪ್ರಯಾಣಿಕರೇ ಗಮನಿಸಿ: ನ.5ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನವೆಂಬರ್‌ 5 ಭಾನುವಾರದಂದು ನಮ್ಮ ಮೆಟ್ರೋದ ನೇರಳೆ ಮಾರ್ಗದ ಸಂಚಾರದಲ್ಲಿ
ವ್ಯತ್ಯಯವಾಗಲಿದೆ.

ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ರೈಲು ಸೇವೆಯನ್ನು ಬೆಳಗ್ಗೆ 7 ಗಂಟೆ ಬದಲಿಗೆ 9 ಗಂಟೆಗೆ ಪ್ರಾರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಬೆಳಗ್ಗೆ 9 ಗಂಟೆಯ ಬಳಿಕ ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಉಳಿದ ಮಾರ್ಗದಲ್ಲಿ ಎಂದಿನಂತೆ ರೈಲುಗಳ ಸಂಚಾರ ವೇಳಾಪಟ್ಟಿಯಂತೆ ಇರಲಿದೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!