October 8, 2026
Thursday, October 8, 2026

ಪೀಕ್ ಅವರ್‌ನಲ್ಲಿ ನಮ್ಮ ಮೆಟ್ರೋ ಸಂಚಾರ ವ್ಯತ್ಯಯ: ಸಾವಿರಾರು ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಗುರುವಾರ ಬೆಳಗ್ಗೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡು, ಪೀಕ್ ಅವರ್‌ನಲ್ಲಿ ಸಾವಿರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಮಾದಾವರದಿಂದ ತಲಘಟ್ಟಪುರದವರೆಗಿನ ಮಾರ್ಗದಲ್ಲಿ ಸೇವೆ ವಿಳಂಬಗೊಂಡಿದ್ದು, ಬದಲಿ ಸಾರಿಗೆ ವ್ಯವಸ್ಥೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು.

ತಾಂತ್ರಿಕ ದೋಷದಿಂದ ಸೇವೆ ಸ್ಥಗಿತ

ಬೆಳಗ್ಗೆ ಸುಮಾರು 8:50ರ ವೇಳೆಗೆ ಹಸಿರು ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಪರಿಣಾಮ ಹಲವು ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲುಗಾಗಿ ಕಾದು ನಿಂತರು. ಸಮಸ್ಯೆ ಪರಿಹರಿಸಲು ಬಿಎಂಆರ್‌ಸಿಎಲ್ ತಾಂತ್ರಿಕ ಸಿಬ್ಬಂದಿ ತುರ್ತು ದುರಸ್ತಿ ಕಾರ್ಯ ಆರಂಭಿಸಿತು.

ಇದನ್ನೂ ಓದಿ:

ಬಿಎಂಆರ್‌ಸಿಎಲ್‌ನಿಂದ ವಿಷಾದ

ಸೇವೆ ಶೀಘ್ರದಲ್ಲೇ ಪುನಃ ಆರಂಭಿಸಲು ಆದ್ಯತೆ ನೀಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದ್ದು, ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸಿದೆ. ಸಾಮಾನ್ಯ ಸೇವೆಯನ್ನು ಸಾಧ್ಯವಾದಷ್ಟು ಬೇಗ ಮರುಸ್ಥಾಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪದೇಪದೇ ಮರುಕಳಿಸುತ್ತಿರುವ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗುತ್ತಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಕಳೆದ 15 ದಿನಗಳ ಹಿಂದೆಯಷ್ಟೇ ನೇರಳೆ ಮಾರ್ಗದಲ್ಲೂ ಇದೇ ರೀತಿಯ ಸಮಸ್ಯೆ ಕಂಡುಬಂದಿತ್ತು. 2024ರಿಂದ 2026ರವರೆಗೆ ವಿವಿಧ ಮಾರ್ಗಗಳಲ್ಲಿ 21ಕ್ಕೂ ಹೆಚ್ಚು ತಾಂತ್ರಿಕ ದೋಷಗಳು ದಾಖಲಾಗಿದ್ದು, ಪೀಕ್ ಅವರ್‌ನಲ್ಲಿ ಸೇವೆ ಸ್ಥಗಿತಗೊಳ್ಳುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Must Read