ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 1,250 ಕೋಟಿ ರೂಪಾಯಿ ಮೌಲ್ಯದ ಮೂರು ಸೆಮಿಕಂಡಕ್ಟರ್ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.
ಗುಜರಾತ್‌ನ ಧೋಲೇರಾ ವಿಶೇಷ ಹೂಡಿಕೆ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕ ಮತ್ತು ಅಸ್ಸಾಂನ ಮೊರಿಗಾಂವ್ ಮತ್ತು ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಪ್ಲಾಂಟ್ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನಡೆಸಿದ್ದಾರೆ.
ಭಾರತವು ಸೆಮಿಕಂಡಕ್ಟರ್ ತಯಾರಿಕೆಗೆ ಪ್ರಮುಖ ಸ್ಥಳವಾಗುವ ಹಾದಿಯಲ್ಲಿದೆ. ಮೂರು ಸೌಲಭ್ಯಗಳು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುತ್ತವೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಸಮಾರಂಭದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
India is set to become a prominent semiconductor manufacturing hub. The three facilities will drive economic growth and foster innovation.https://t.co/4c9zV3G9HL
— Narendra Modi (@narendramodi) March 13, 2024