ನಮೋ ಭಾರತ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ: ಕಲ್ಲು ತೂರಾಟ, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನಲ್ಲಿ ವಿಜಯಪುರದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ‘ನಮೋ ಭಾರತ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್​​ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ.

ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಯುವ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಿದ್ದು, ಚಕ್ರವರ್ತಿ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಸೂಲಿಬೆಲೆ ವಿರುದ್ಧ ಪೋಸ್ಟರ್ ಪ್ರದರ್ಶಿಸಿ ಘೋಷಣೆ ಕೂಗಿದ ಕೆಲವರು ಕಲ್ಲುತೂರಾಟ ನಡೆಸಿದ್ದಾರೆ.ಈ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಸಹ ತಿರುಗಿಬಿದ್ದು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿಡಿದೆದ್ದರು. ಸ್ಥಳದಲ್ಲಿ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!