ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅದ್ದೂರಿ ರೋಡ್ ಶೋ ನಡೆಸಿದರು. ಈ ವೇಳೆ ಮಾರ್ಗದುದ್ದಕ್ಕೂ ಜನರು ಅವರಿಗೆ ಅದ್ದೂರಿ ಸ್ವಾಗತ ನೀಡಿದರು.
ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗುಜರಾತ್‌ನ ಸಂಸದ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ನರೋಡಾ ಪ್ರದೇಶವನ್ನು ತಲುಪಿದರು. ನಂತರ ನಗರದ ನಿಕೋಲ್ ಪ್ರದೇಶದ ಹರಿದರ್ಶನ್ ಕ್ರಾಸ್‌ರೋಡ್‌ನಿಂದ 2 ಕಿ.ಮೀ. ಉದ್ದದ ರೋಡ್ ಶೋ ನಡೆಸಿದರು.
ರೋಡ್‌ಶೋ ಮಾರ್ಗದ ಎರಡೂ ಬದಿಗಳಲ್ಲಿ ಸಾವಿರಾರು ಜನರು ಸಾಲುಗಟ್ಟಿ ನಿಂತು ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು.