ಮಂಗಳೂರು ಸೆಂಟ್ರಲ್- ತಿರುವನಂತಪುರ ವಂದೇ ಭಾರತ್ ಓಡಾಟಕ್ಕೆ ನಮೋ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಭಾಗದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸಾಗಿಸಿದ್ದಾರೆ. ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

ಈ ಬಗ್ಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀ ನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು , ರೈಲ್ವೆ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು, ರೈಲ್ವೆ ಹೋರಾಟಗಾರು ಭಾಗವಹಿಸಿದ್ದರು.

ಮಂಗಳೂರು ಸೆಂಟ್ರಲ್-ತಿರುವನಂತಪುರಂ ನಡುವೆ ಸಂಚರಿಸುವ ಈ ರೈಲು, ಬುಧವಾರ ಹೊರತುಪಡಿಸಿ ವಾರ ಆರು ದಿನ ಓಡಾಟ ನಡೆಸಲಿದೆ. ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಡುವ ರೈಲು, ಮಧ್ಯಾಹ್ನ ೩.೦೫ಕ್ಕೆ ತಿರುವನಂತಪುರ ತಲುಪಲಿದೆ. ಸಂಜೆ 4.05ಕ್ಕೆ ತಿರುವನಂತಪುರದಿಂದ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!