‘ಲೋಕ ‘ ಮಹಾಭಾರತ ಗೆಲ್ಲಲು ಕೇಸರಿ ಸೇನೆಗೆ ‘ನಮೋ’ ಸಾಥ್: ಮೈಸೂರು, ಕರಾವಳಿಯಲ್ಲಿ ಮೋದಿ ಭರಾಟೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಕೇಸರಿ ಸೇನೆಗೆ ಹೆಚ್ಚಿನ ಶಕ್ತಿ ನೀಡಲು ಪ್ರಧಾನಿ ಮೋದಿ ಇದೀಗ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ. ಸಿದ್ದರಾಮಯ್ಯ ಅವರ ತವರು ಜೆಲ್ಲೆಯಿಂದಲೇ ತಮ್ಮ ಮತಬೇಟೆ ಶುರು ಮಾಡಲಿದ್ದಾರೆ.

ಮೊದಲು ಮೈಸೂರಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 4.30ರಿಂದ ಮಹಾರಾಜ ಕಾಲೇಜು ಆವರಣದಲ್ಲಿ ನಡೆಯುವ ಮೈತ್ರಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಮೈತ್ರಿ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹಾಗಾಗಿ ಮೈಸೂರಿನಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ.

ಹೆಚ್ಚುವರಿಯಾಗಿ, ಅನಿರೀಕ್ಷಿತ ಘಟನೆಗಳನ್ನು ತಡೆಗಟ್ಟಲು ಭದ್ರತಾ ಕ್ರಮಗಳು ಜಾರಿಯಲ್ಲಿವೆ. ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಭದ್ರತಾ ತಪಾಸಣೆ ನಡೆಸಿದೆ. ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ, ವಿಶೇಷ ಪೊಲೀಸ್ ಘಟಕ ಮತ್ತು ನಗರ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದಾದ ಬಳಿಕ ಪ್ರಧಾನಿ ಮೋದಿ ಇಂದು ಸಂಜೆ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಮತ ಯಾಚಿಸಲಿದ್ದಾರೆ.ನಗರದ ಲೇಡಿಹಿಲ್‌ ನಾರಾಯಣಗುರು ವೃತ್ತದಿಂದ ನವಭಾರತ್ ವೃತ್ತದವರೆಗೆ 2 ಕಿ.ಮೀ ರೋಡ್ ಶೋ ನಡೆಸಲಾಗುವುದು. ಈ ಮೂಲಕ ಕರಾವಳಿ ಭಾಗದ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಮತ ಬೇಟೆ ನಡೆಸಲಿದ್ದಾರೆ.

ಪ್ರಧಾನಿ ಮೋದಿಯವರ ರೋಡ್ ಶೋ ನಡೆಯುವ ರಸ್ತೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬಿಗಿ ಭದ್ರತೆಗಾಗಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರೋಡ್ ಶೋ ಸಾಗುವ ರಸ್ತೆಯ ಬಹುಮಹಡಿ ಕಟ್ಟಡಗಳ ಮೇಲೆ ಸ್ಕೈ ಸೆಂಟ್ರಿಗಳು ಹದ್ದಿನ ಕಣ್ಣಿಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!