ಉತ್ತರ ಕರ್ನಾಟಕದಲ್ಲಿ ‘ನಮೋ’ ಸಂಚಾರ, ಬೆಳಗಾವಿಯಿಂದಲೇ ಶುರು ಭರ್ಜರಿ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದಲ್ಲಿ ಅಂತ್ಯಗೊಳ್ಳುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮತ್ತೊಂದು ದಿಢೀರ್ ಭೇಟಿ ನೀಡುತ್ತಿದ್ದಾರೆ. ಭಾನುವಾರ (ಏ.28) ದಿನವಿಡೀ ರಾಜ್ಯದಲ್ಲಿರಲಿದ್ದು, ಬೆಳಗಾವಿ ಸೇರಿ ನಾಲ್ಕು ಕಡೆ ಬಿಜೆಪಿ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಪ್ರಧಾನಿ ಮೋದಿ ಅವರು ಇಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಮತ್ತಿತರರೊಂದಿಗೆ ಉಪಹಾರ ಸೇವಿಸಿದರು. ಅವರು ಬೆಳಿಗ್ಗೆ 10:55 ಕ್ಕೆ ತಮ್ಮ ಹೋಟೆಲ್‌ನಿಂದ ಹೊರಟು 11 ಗಂಟೆಗೆ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!