April 11, 2026
Saturday, April 11, 2026
spot_img

ಇಸ್ರೇಲ್‌ಗೆ ತಲುಪಿದ ‘ನಮೋ’…ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ನೆತನ್ಯಾಹು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ತಲುಪಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದರು.

ಇಂದು ಮತ್ತು ನಾಳೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಜೊತೆಯಾಗಿ ಭಾಗಿಯಾಗಲಿದ್ದಾರೆ. ನಾಳೆ ದ್ವಿಪಕ್ಷೀಯ ಮಾತುಕತೆ ಮತ್ತು ಜಂಟಿ ಪತ್ರಿಕಾಗೋಷ್ಠಿ ನಡೆಯಲಿದೆ.

ಪ್ರಧಾನಿ ಮೋದಿ ಇಸ್ರೇಲ್ ಸಂಸತ್‌ ಕ್ನೆಸೆಟ್‌ನಲ್ಲಿ ಭಾಷಣ ಮಾಡಲಿದ್ದಾರೆ. ಯಾದ್ ವಶೆಮ್ ಹೋಲೋಕಾಸ್ಟ್ ಸ್ಮಾರಕ ಸಂಗ್ರಹಾಲಯಕ್ಕೆ ಭೇಟಿ ಹಾಗೂ ಇಸ್ರೇಲ್‌ನಲ್ಲಿ ನೆಲೆಸಿರುವ ಭಾರತೀಯ-ಯಹೂದಿ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !