ಮೊದಲು ಕರಾವಳಿಗೆ ಎಂಟ್ರಿ ಕೊಡಲಿದ್ದಾರೆ ‘ನಮೋ’: ಬೃಹತ್ ಸಮಾವೇಶ, ರೋಡ್ ಶೋ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಅದರಂತೆ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಪ್ರಚಾರ ನಡೆಯಲಿದೆ.

ಈ ಹಿಂದೆ ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಸ್ಥಳಾಂತರವಾಗಿದೆ.

ಮಂಗಳೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ಸಂಜೆ 6:00 ರಿಂದ 7:00 ರವರೆಗೆ ಪಥಸಂಚಲನ ನಡೆಯಲಿದೆ.

ಪ್ರಧಾನಿ ಮೋದಿ ಅವರು ಕಳೆದ ಶುಕ್ರವಾರ ಕರ್ನಾಟಕದ ಬಿಜೆಪಿ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡಿದ್ದಾರೆ. ಬೂತ್ ಮಟ್ಟದಲ್ಲಿ ಚುನಾವಣಾ ಪ್ರಚಾರ ಹೇಗೆ ನಡೆಯುತ್ತಿದೆ ಎಂದು ಕೇಳಿದ್ದಾರೆ. ಇದೀಗ ಖುದ್ದು ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ ‘ನಮೋ’.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!