ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭವಾಗಿದೆ.
ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರದ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರನ್ನು ಸೂಚಿಸಲಾಗಿದೆ.
ದೆಹಲಿಯಲ್ಲಿ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದ ಚುನಾವಣೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ನಾನು ಬೇರೆ ಕ್ಷೇತ್ರಗಳಿಗೆ ಹೋಗಿ ಸ್ಪರ್ಧಿಸುವುದು ಸರಿಯಲ್ಲ. ನಾನು ಅಭ್ಯರ್ಥಿಯೂ ಅಲ್ಲ. 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಈ ಪ್ರದೇಶದಲ್ಲಿ ಪಂಚಮಸಾಲಿ ಸಮಾಜವೂ ಇದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳುವ ಮೂಲಕ ತಾವು ಈ ಕ್ಷೇತ್ರದ ಅಭ್ಯರ್ಥಿಯಲ್ಲ ಎಂದು ತಿಳಿಸಿದ್ದಾರೆ.