ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿದೆ ಅಂತ ಫೋಟೋವೊಂದು ಭಾರೀ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ನಿರ್ದೇಶಕ ನಂದ ಕಿಶೋರ್ ಮಾತನಾಡಿದ್ದಾರೆ. ನಿರ್ದೇಶಕ ನಂದ ಕಿಶೋರ್ ಮಾತನಾಡಿ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಛಾಯಾಚಿತ್ರದ ಬದಲಾವಣೆ ಮಾಡಿರಬಹುದು ಎಂದು ಹೇಳಿದ್ದಾರೆ.
ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಸಹಾಯದಿಂದ ಯಾವುದೇ ಫೋಟೋವನ್ನು ಯಾವುದೇ ರೀತಿಯಲ್ಲಿ ಮಾರ್ಪಡಿಸಬಹುದು. ಆದರೆ, ಪೊಲೀಸ್ ಇಲಾಖೆ ತುಂಬಾ ನಿಷ್ಠೆಯಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಇದು ಜೈಲಿನಲ್ಲಿ ನಡೆಯುತ್ತದೆ ಎಂದು ನಾನು ಭಾವಿಸುವುದಿಲ್ಲ. ಬೇರೆ ಯಾವುದೇ ಫೋಟೋ ವೈರಲ್ ಆಗಿಲ್ಲ. ಆದರೆ ಅದೇ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಅವರ ನಿರ್ಧಾರವನ್ನು ಪ್ರಶ್ನಿಸುವಂತಿಲ್ಲ. ಆದಾಗ್ಯೂ, ಇದು ಇನ್ನೂ ತನಿಖೆಯ ಹಂತದಲ್ಲಿದೆ. ಸತ್ಯ ಹೊರಬರಲಿದೆ ಎಂದು ನಂದ ಕಿಶೋರ್ ಹೇಳಿದ್ದಾರೆ.