Friday, June 9, 2023

Latest Posts

ನಂದಿಹಿಲ್ಸ್ ರೋಪ್‌ವೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನಂದಿಹಿಲ್ಸ್ ರೋಪ್‌ವೇಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಕಾರ್ಯಕ್ರಮದ ಜತೆಗೆ 800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡವನ್ನು ಉದ್ಘಾಟನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ: ನಂದಿಹಿಲ್ಸ್ ರೋಪ್ ವೇ ಶಂಕುಸ್ಥಾಪನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿನಂದಿಬೆಟ್ಟದಲ್ಲಿ ಪ್ಯಾಸೆಂಜರ್ ರೋಪ್ ವೇ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಡೈನಾಮಿಕ್ಸ್ ರೋಪ್ ವೇ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದ ಮಾಡಿಕೊಂಡಿದ್ದು, 2.93ಕಿ.ಮೀ ರೋಪ್‌ವೇ ಅಭಿವೃದ್ಧಿಪಡಿಸಲಾಗುತ್ತಿದೆ.

ಪ್ರವಾಸಿಗರಿಗೆ ಸುತ್ತಮುತ್ತಲಿನ ಪ್ರದೇಶದ ವೈಮಾನಿಕ ಚಿತ್ರಣ ನೀಡುವುದರ ಜತೆಗೆ ಮಾಲೀನ್ಯವೂ ಕಡಿಮೆಯಾಗಲಿದೆ. ನಂದಿ ಬೆಟ್ಟಕ್ಕೆ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸುವಲ್ಲಿ ರೋಪ್ ವೇ ಪ್ರಮುಖ ಪಾತ್ರ ನಿರ್ವಹಿಸಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!