Tuesday, August 16, 2022

Latest Posts

ನಂದಿಬೆಟ್ಟ ಗಿರಿಧಾಮಕ್ಕೆ ತ್ವರಿತವಾಗಿ ರೋಪ್ ವೇ ನಿರ್ಮಿಸಲು ಸಚಿವ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸಲು ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜತೆಗೆ, ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಮಾದರಿಯಲ್ಲಿ ಶ್ರವಣಬೆಳಗೊಳದಲ್ಲಿ ಬಾಹುಬಲಿ ಸಾಕ್ಷ್ಯಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.
185 ಕೋಟಿ ಮೊತ್ತದ ಟೆಂಡರ್ ಕರೆದು ಜೋಗ ಜಲಪಾತದ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಜೋಗದಲ್ಲಿ 200-300 ಕ್ಯೂಸೆಕ್ಸ್ ನೀರು ಹರಿಸಿ ವರ್ಷಪೂರ್ತಿ ನೀರು ಹರಿಯುವಂತೆ ಮಾಡಲಿದ್ದೇವೆ. ಹೊನ್ನಾವರದಿಂದ ಜಲಮಾರ್ಗದ ಮೂಲಕ ಗೇರುಸೊಪ್ಪೆಗೆ ತರಲು ಸ್ಪೀಡ್ ಬೋಟ್ ವ್ಯವಸ್ಥೆ ಮಾಡಲಿದ್ದೇವೆ. ಕೇವಲ ವಿದ್ಯುತ್ ಗೆ ಮಾತ್ರ ಜೋಗದ ನೀರು ಬಳಕೆಯಾಗುತ್ತಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ಜೋಗದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಾಗಲಿದೆ. ಕೇರಳದಿಂದ ಗೋವಾ ಹೋಗುವ ಪ್ರವಾಸಿಗರನ್ನು ಸೆಳೆಯಲು ಸಹ ಕೆಲಸ ನಡೆಯುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಪ್ರವಾಸೋದ್ಯಮ ಅಂದರೆ ಎಲ್ಲರೂ ನೆಗ್ಲೆಕ್ಟ್ ಖಾತೆ ಎಂದು ಹೇಳುತ್ತಿದ್ದರು. ಆದರೆ ನಾನು ಅದನ್ನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದೇನೆ. 50ರಿಂದ 55 ಲಕ್ಷ ಉದ್ಯೋಗ ಪ್ರವಾಸೋದ್ಯಮದಿಂದ ಸೃಷ್ಟಿಯಾಗುತ್ತಿದೆ. ಬಜೆಟ್ ನಲ್ಲಿ ನಮಗೆ ಹಣದ ಕೊರತೆ ಇತ್ತು. ಹಣಕಾಸು ಇಲಾಖೆಯೊಂದಿಗೂ ಕೂಡ ಮಾತನಾಡಿದ್ದೇವೆ. ಆದ್ಯತೆ ಮೇರೆಗೆ ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡ್ತೇವೆ ಅಂತ ಒಪ್ಪಿಗೆ ಕೊಟ್ಟಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss