ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಂದಿನಿ ದೋಸೆ-ಇಡ್ಲಿ ಬ್ಯಾಟರ್ ಬ್ಯುಸ್‌ನೆಸ್ ಜೋರಾಗಿದ್ದು, ಇನ್ನು ಮುಂದೆ ಆನ್‌ಲೈನ್‌ನಲ್ಲಿಯೂ ಹಿಟ್ಟು ಲಭ್ಯವಾಗಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತೇಜನದಿಂದ ಕೆಎಂಎಫ್ ತನ್ನ ‘ನಂದಿನಿ’ ಬ್ರಾಂಡ್ ಮೂಲಕ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಪರಿಚಯಿಸಿದ್ದು ನಂದಿನಿ ಇಡ್ಲಿ, ದೋಸೆ ಹಿಟ್ಟಿಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ.
ನಗರದಲ್ಲಿ ಜನಪ್ರಿಯವಾಗಿರುವ ಉತ್ಪನ್ನದ ಮಾರಾಟವನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲು ಕೆಎಂಎಫ್ ಮುಂದಾಗಿದೆ.
ಇದಕ್ಕಾಗಿ… pic.twitter.com/BN1pRiF9T8
— Karnataka Congress (@INCKarnataka) March 25, 2025
ಇತ್ತೀಚಿನ ದಿನಗಳಲ್ಲಿ ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಕೆಎಂಎಫ್ ಸಂಸ್ಥೆಯು ಉತ್ಪಾದನೆ ಜೊತೆಗೆ ಮಾರಾಟವನ್ನು ಹೆಚ್ಚಿಸಲು ಪ್ಲ್ಯಾನ್ ಮಾಡಿದೆ. ಇದೀಗ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಆನ್‌ಲೈನ್‌ನಲ್ಲಿಯೂ ಸಿಗಲಿದ್ದು, ನಿಮ್ಮ ಮನೆಗೆ ಬಂದು ತಲುಪಲಿದೆ.
ಇಷ್ಟು ದಿನ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ನಂದಿನಿ ಪಾರ್ಲರ್‌ನಲ್ಲಿ ಮಾತ್ರ ಸಿಗುತ್ತಿತ್ತು. ಇದೀಗ ನಂದಿನಿ ಪ್ರಾಡಕ್ಟ್ ಇ-ಕಾಮರ್ಸ್‌ಗೆ ಲಗ್ಗೆಯಿಟ್ಟಿದ್ದು, ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿಕೊಳ್ಳಬಹುದಾಗಿದೆ. ಇ-ಕಾಮರ್ಸ್ ವೆಬ್‌ಸೈಟ್ ಅಥವಾ ಆಪ್ ಮೂಲಕ ಆರ್ಡರ್ ಮಾಡಬಹುದು. ಸದ್ಯ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಉತ್ಪಾದನೆ ಹೆಚ್ಚಿಸಿ, ಇ-ಕಾಮರ್ಸ್ ಮೂಲಕ ಮಾರಾಟ ಮಾಡಲು ಕೆಎಂಎಫ್ ಮುಂದಾಗಿದೆ.