Friday, November 7, 2025

ನಂದಿನಿ ತುಪ್ಪದ ಬೆಲೆ ಬರೋಬ್ಬರಿ 90ರೂ ಏರಿಕೆ: ಡಿಸಿಎಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. 

ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದು ರೈತರಿಗೆ ಒಳ್ಳೆದಾಗಲಿದೆ. 

ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂಬುದು ಅವರ ವಾದವಾಗಿದೆ.

error: Content is protected !!