Monday, July 4, 2022

Latest Posts

ನಂದಿನಿ ತುಪ್ಪ ತಯಾರಿಕೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಹೊಸದಿಗಂತ ವರದಿ,ಮೈಸೂರು:

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಹೊಸಹುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾದ ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.
ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ಸಂಬAಧ ನಾಲ್ವರು ಆರೋಪಿಗಳ ಪೈಕಿ ಇಬ್ಬರ ಹೆಸರು ಎಫ್‌ಐಆರ್ ನಲ್ಲಿ ಉಲ್ಲೇಖ ಆಗಿತ್ತು. ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿ ತನಿಖೆ ಮುಂದುವರೆದಿದ್ದು, ಆರೋಪಿಗಳು ನೀಡುವ ಸುಳಿವಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಕರಣ ಸಂಬAಧ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಆರೋಪಿಗಳು ಬಹಳ ವರ್ಷಗಳಿಂದ ಮೈಸೂರಿನಲ್ಲೇ ನೆಲೆಸಿದ್ದರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗಿನ ತನಿಖೆ ಪ್ರಕಾರ ಕೆಎಂಎಫ್ ನ ಸಿಬ್ಬಂದಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಹಾಗಂತ ಈಗಲೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ನೈಟ್ ಕರ್ಫೂ್ಯ ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಯಾದ್ಯಂತ 13 ಚೆಕ್ ಪೋಸ್ಟ್
ಮಂಗಳವಾರ ರಾತ್ರಿ10 ಗಂಟೆಯಿAದ ನೈಟ್ ಕರ್ಫೂ್ಯ ಜಿಲ್ಲೆಯಾದ್ಯಾಂತ ಜಾರಿಯಾಗುತ್ತಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ 13 ಚೆಕ್ ಪೋಸ್ಟ್ ತೆರೆಯಲಾಗಿದೆ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ 50% ಆಸನಗಳ ಭರ್ತಿಗೆ ಅವಕಾಶವಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫೂ್ಯಗೆ ಜನರು ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss