March 12, 2026
Thursday, March 12, 2026
spot_img

ನಂದಿನಿ ಯಾವತ್ತೂ ಗುಣಮಟ್ಟದ ಜೊತೆ ರಾಜಿಯಾಗಿಲ್ಲ: ಅಪಪ್ರಚಾರಕ್ಕೆ ಡಿ.ಕೆ.ಸುರೇಶ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು ಮಾಡುವಾಗ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

ನಾವು ಖಾಸಗಿಯವರ ಜೊತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ಆದರೆ ನಂದಿನಿ ಯಾವತ್ತೂ ಗುಣಮಟ್ಟದ ಜೊತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !