‘ನಂದಿನಿ’ ಇನ್ ಸೇಫ್ ಜೋನ್.. ಬೇರೆ ಬ್ರಾಂಡ್ ಗೆ ಢವಢವ, ಸ್ಯಾಂಪಲ್‌ ಟೆಸ್ಟ್ ಪಕ್ಕಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ.

ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!