ನಂದಿನಿ ಹಾಲಿನ ಬೆಲೆ ಮತ್ತೆ ಹೆಚ್ಚಳ?: ಸಚಿವ ಕೆ.ವೆಂಕಟೇಶ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಂದಿನಿ ಹಾಲಿನ ಬೆಲೆಯನ್ನುಮತ್ತೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ ಹೇಳಿದ್ದಾರೆ.

ಈ ಕುರಿತು ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ ಅವರು, ಕಳೆದ ಆಗಸ್ಟ್ ನಲ್ಲಿ ಪ್ರತೀ ಲೀಟರ್‌ಗೆ 3 ರೂ.ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದರು.

ರೈತರಿಗೆ ಪ್ರಯೋಜನವಾಗುವುದಾದರೆ ಈ ಕ್ರಮವನ್ನು ಪಕ್ಷಾತೀತವಾಗಿ ಬೆಂಬಲಿಸಲು ಸಿದ್ಧ ಎಂದು ಪರಿಷತ್ ಸದಸ್ಯರು ತಮ್ಮ ಬೆಂಬಲ ಸೂಚಿಸಿದ್ದಾರೆ.

ಆಗಸ್ಟ್ ನಲ್ಲಿ ಬೆಲೆ ಏರಿಕೆಯ ನಂತರ, ನಂದಿನಿ ಹಾಲಿನ ದರವು ಪ್ರತಿ ಲೀಟರ್‌ ಟೋನ್ಡ್ ಹಾಲಿಗೆ 42 ರೂ., ಹೋಮೋಜೆನೈಸ್ಡ್ ಹಾಲಿಗೆ 43 ರೂ., ಪಾಶ್ಚರೀಕರಿಸಿದ ಹಾಲಿಗೆ 46 ರೂ. ಮತ್ತು ಶುಭಂ ವಿಶೇಷ ಹಾಲಿಗೆ 48 ರೂ. ಆಗಿದೆ.

ಗೋವಿನ ಮೇವಿನ ಬೆಲೆ ಏರಿಕೆಯಾಗಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹಾಲು ಉತ್ಪಾದಕರಿಗೆ ಸರ್ಕಾರದ ಬೆಂಬಲ ಅಗತ್ಯ ಎಂಬುದು ನಮಗೆ ತಿಳಿದಿದೆ ಎಂದರು. ನಂದಿನಿ ಬ್ರಾಂಡ್‌ನಲ್ಲಿ ಮಾರಾಟವಾಗುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಾಲಿನ ಚಿಲ್ಲರೆ ಮಾರಾಟ ಬೆಲೆ ಏರಿಕೆಗೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲರಿಂದ ಬೆಂಬಲ ದೊರೆತರೆ ಮಾತ್ರ ಸರ್ಕಾರವು ಮುಂದುವರಿಯುತ್ತದೆ ಎಂದು ಸಚಿವರು ಹೇಳಿದರು.

ಸದ್ಯದ ಸವಾಲುಗಳಿಗೆ ಸ್ಪಂದಿಸಿ ಸರ್ಕಾರವು ಈಗಾಗಲೇ ಹಾಲಿನ ಪ್ರೋತ್ಸಾಹಧನವನ್ನು 3 ರೂ.ಗಳಷ್ಟು ಹೆಚ್ಚಿಸಿದೆ ಮತ್ತು ಹಾಲಿನ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳದ ಬಗ್ಗೆ ಮುಕ್ತ ಮನಸ್ಸು ಹೊಂದಿದೆ ಎಂದು ಅವರು ಹೇಳಿದರು.

ಬಿಜೆಪಿಯ ತೇಜಸ್ವಿನಿ ಗೌಡ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಈ ಪ್ರಸ್ತಾವನೆಗೆ ಬೆಂಬಲ ಸೂಚಿಸಿದರು. ರೈತರ ಹಿತದೃಷ್ಟಿಯಿಂದ ಯಾವುದೇ ಕ್ರಮವನ್ನು ಬೆಂಬಲಿಸಲು ಸಿದ್ಧರಿರುವುದಾಗಿ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!