ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸವರ್ಷದಿಂದಲೇ ನಂದಿನ ಹಾಲು ಹಾಗೂ ಮೊಸರಿನ ದರ ಏರಿಕೆಯಾಗುವ ಸಾಧ್ಯತೆ ಇದೆ.
ಹೌದು,ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಹಾಲಿನ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿದ್ದು, ಜನವರಿಯಿಂದ ಹಾಲು, ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಹಾಲಿನ ದರ ಏರಿಸುವಂತೆ ರೈತರು ಒತ್ತಡ ಹಾಕುತ್ತಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ಬೆಲೆ ಕಡಿಮೆ ಬೆಲೆ ಇದೆ. ರಾಜ್ಯದಲ್ಲಿ ಒಂದು ಲೀಟರ್ ಹಾಲಿನ ಬೆಲೆ 42 ರೂಪಾಯಿ ಇದೆ. ಆದರೆ ಇದೇ ಹಾಲಿನ ಬೆಲೆ ಬೇರೆ ರಾಜ್ಯಗಳಲ್ಲಿ 48-51 ಇದೆ ಎನ್ನುವುದು ಕೆಎಂಎಫ್ ವಾದವಾಗಿದೆ ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿದ್ದಾರೆ.