ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ? ಕೆಎಂಎಫ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ನಮ್ಮ ಕರ್ನಾಟಕದ ನಂದಿನಿ ಬ್ರ್ಯಾಂಡ್‌ ಎಂಟ್ರಿ ಕೊಡಲು ಸಿದ್ಧವಾಗಿದೆ.

ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್​​ ಚಿಂತನೆ ನಡೆಸಿದೆ. ದಕ್ಷಿಣ ಭಾರತದ ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್​ ಈ ಯೋಜನೆಗೆ ಮುಂದಾಗಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಹಾಲು ಸಂಗ್ರಹ ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್​ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ. ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!