June 15, 2026
Monday, June 15, 2026
spot_img

ತಿರುಪತಿ ಲಡ್ಡುಗೆ ನಂದಿನಿ ತುಪ್ಪ: ಬಮುಲ್–ಟಿಟಿಡಿ ಮಧ್ಯೆ ನಡೆಯಿತು ಹೊಸ ಒಪ್ಪಂದ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ನಂದಿನಿ ಬ್ರ್ಯಾಂಡ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಒಪ್ಪಂದದಡಿ ಮುಂದಿನ ಆರು ತಿಂಗಳಲ್ಲಿ ಸುಮಾರು 2 ಲಕ್ಷ ಕೆಜಿ ತುಪ್ಪ ಪೂರೈಕೆ ಮಾಡಲಾಗುತ್ತದೆ. ಪ್ರತಿದಿನ ಸುಮಾರು 11.5 ರಿಂದ 12 ಟನ್ ನಂದಿನಿ ತುಪ್ಪ ತಿರುಪತಿಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಒಪ್ಪಂದದ ಮೌಲ್ಯ ಸುಮಾರು 136 ಕೋಟಿ ರೂಪಾಯಿಗಳಷ್ಟಾಗಿದೆ.

ಇದನ್ನೂ ಓದಿ

ತುಪ್ಪದ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಲು ಡಿಜಿಟಲ್ ಲಾಕ್ ವ್ಯವಸ್ಥೆ ಸೇರಿದಂತೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಡೇರಿ ಆವರಣದಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಟಿಟಿಡಿ ಹೆಚ್ಚಿನ ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪವನ್ನು ಆಯ್ಕೆ ಮಾಡಿದ್ದು, ಲಡ್ಡು ತಯಾರಿಕೆಯಲ್ಲಿ ಮತ್ತೆ ಕರ್ನಾಟಕದ ಉತ್ಪನ್ನ ಬಳಕೆಯಾಗುತ್ತಿರುವುದು ವಿಶೇಷವಾಗಿದೆ. ಕೆಎಂಎಫ್ ಈಗ ದಿನಕ್ಕೆ ಕೋಟಿಗಟ್ಟಲೆ ಲೀಟರ್ ಹಾಲು ಸಂಗ್ರಹಿಸುತ್ತಿದ್ದು, ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸುವ ಗುರಿ ಹೊಂದಿದೆ. ಈ ಒಪ್ಪಂದ ರಾಜ್ಯದ ಹಾಲು ಉತ್ಪಾದಕರಿಗೆ ಹೊಸ ಭರವಸೆ ಮತ್ತು ಆತ್ಮವಿಶ್ವಾಸ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !