ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಸ್ರೇಲ್ ನಲ್ಲಿ 12 ವರ್ಷಗಳ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಡಳಿತ ಕೊನೆಗೊಂಡಿದ್ದು, ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಇಸ್ರೇಲ್ ನೂತನ ಪ್ರಧಾನಿ ನಾಫ್ತಾಲಿ ಬೆನೆಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶುಭಾಶಯ ಕೋರಿದರು.
ಟ್ವೀಟ್ ಮೂಲಕ ಶುಭಾಶಯ ಕೋರಿದ ಪ್ರಧಾನಿ ಮೋದಿ, ‘ಘನತೆವೆತ್ತ ನಾಫ್ತಾಲಿ ಬೆನೆಟ್ ಇಸ್ರೇಲ್ ಪ್ರಧಾನಿಯಾದುದಕ್ಕೆ ಅಭಿನಂದನೆಗಳು. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳು ಮೇಲ್ದರ್ಜೆಗೇರಿದ 30 ವರ್ಷಗಳನ್ನ ನಾವು ಆಚರಿಸುತ್ತಿರುವಾಗ, ನಾನು ನಿಮ್ಮನ್ನು ಭೇಟಿ ಮಾಡಲು ಮತ್ತು ನಮ್ಮ ಎರಡೂ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನ ಆಳಗೊಳಿಸಲು ಎದುರು ನೋಡುತ್ತಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.
Excellency @naftalibennett, congratulations on becoming the Prime Minister of Israel. As we celebrate 30 years of the upgradation of diplomatic relations next year, I look forward to meeting you and deepening the strategic partnership between our two countries. @IsraeliPM
— Narendra Modi (@narendramodi) June 14, 2021