ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿಯಿಂದ ಶಾಲೆ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿ ಬಹುತೇಕ ಪ್ರಕ್ರಿಯೇ ಪೂರ್ಣಗೊಳಿಸಲಾಗಿದೆ.10 ವರ್ಷದಿಂದ 18 ವರಗಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.