ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಫಲಕಗಳನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಿನ್ನೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು.
ಬೋರ್ಡ್ ಹರಿದು, ಬೋರ್ಡ್‌ಗಳಿಗೆ ಕಪ್ಪು ಮಸಿ ಬಳಿದು ಕಲ್ಲು ತೂರಾಟ ನಡೆಸಿ ಹಿಂಸಾಚಾಎ ಮಾಡಲಾಗಿತ್ತು. ಕಾನೂನು ಕೈಗೆ ತೆಗೆದುಕೊಂಡ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇದೀಗ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ೨೯ ಕರವೇ ಕಾರ್ಯಕರ್ತರನ್ನು ಜ.೧೦ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ನೂರು ಬಾರಿ ನಮ್ಮನ್ನು ಜೈಲಿಗೆ ಹಾಕಿ ಯಾವ ಭಯವೂ ಇಲ್ಲ. ಆದರೆ ಕನ್ನಡ ಇಲ್ಲದ ನಾಮಫಲಕ ನಾವು ಕಿತ್ತೊಗೆಯುತ್ತೇವೆ. ನಮ್ಮ ನಾಡಿನ ಇತಿಹಾಸಕ್ಕಾಗಿ ನಾವು ಹೋರಾಡುತ್ತೇವೆ. ಪೊಲೀಸರ ಮೇಲೆ ನಾವು ಹಲ್ಲೆ ಮಾಡಿಲ್ಲ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.