Sunday, November 9, 2025

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸೋದಿಲ್ಲ ಎಂದ ನಾರಾಯಣಮೂರ್ತಿ- ಸುಧಾಮೂರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.

ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಅಕ್ಟೋಬರ್ 10 ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.

error: Content is protected !!