Wednesday, August 17, 2022

Latest Posts

ಕೇಂದ್ರ ಸಚಿವ ಸಂಪುಟದಲ್ಲಿ ನಾರಾಯಣಸ್ವಾಮಿಗೆ ಮಂತ್ರಿ ಸ್ಥಾನ: ಬಿಜೆಪಿ ನಗರ ಘಟಕದಿಂದ ಸಂಭ್ರಮಾಚರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯ ಎ.ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಗರ ಘಟಕದಿಂದ ಬಿಜೆಪಿ ಕಾರ್ಯಾಲಯದ ಮುಂದೆ ಪಟಾಕಿ ಸಿಡಿದ ಸಂಭ್ರಮಾಚರಣೆ ನಡೆಸಿದರು. ನೆರೆದಿದ್ದ ಜನರಿಗೆ ಸಿಹಿ ಹಂಚಿ ಖುಷಿಪಟ್ಟರು.
ಕಾರ್ಯಾಲಯದ ಮುಂದೆ ಜಮಾಯಿಸಿದ ಕಾರ್ಯಕರ್ತರು ಜಯಘೋಷಗಳನ್ನು ಕೂಗಿದರು. ಹಿಂದುಳಿದ ಜಿಲ್ಲೆಯ ಸಂಸದ ಎ.ನಾರಾಯಣಸ್ವಾಮಿ ಅವರನ್ನು ಗುರುತಿಸಿ ಸಚಿವ ಸ್ಥಾನ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದ್ರಿನಾಥ್ ಮಾತನಾಡಿ, ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರು ಹಿಂದುಳಿದ ಜಿಲ್ಲೆ ಅದರಲ್ಲೂ ಶೋಷಿತ ಸಮುದಾಯದ ವ್ಯಕ್ತಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡದ್ದು ಸ್ವಾಗತಾರ್ಹ ಎಂದರು.
ಎ.ನಾರಾಯುಣಸ್ವಾಮಿ ಅವರು ಅನುಭವಿ ರಾಜಕಾರಣಿಯಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಸಮಾಜ ಕಲ್ಯಾಣ ಸಚಿವರಾಗಿ ರಾಜ್ಯದಲ್ಲಿ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಸಂಘಪರಿವಾರದ ಹಿನ್ನೆಲೆಯಿಂದ ಬಂದ ಅವರಿಗೆ ಉತ್ತಮ ಸ್ಥಾನ ದೊರೆತಿರುವುದು ಸಂತಸದ ವಿಷಯ ಎಂದು ಹೇಳಿದರು.
ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕದ ನಾಲ್ಕು ಜನರಿಗೆ ಅವಕಾಶ ನೀಡಲಾಗಿದೆ. ಆ ಮೂಲಕ ಎಲ್ಲ ವರ್ಗದವರಿಗೆ ಪ್ರಾತಿನಿಧ್ಯ ನೀಡಿದಂತಾಗಿದೆ. ನಾರಾಯಣಸ್ವಾಮಿ ಅವರಿಗೆ ಅರ್ಹತೆಯ ಆಧಾರದ ಮೇಲೆ ಸಚಿವ ಸ್ಥಾನ ದೊರೆತಿದೆ. ಈ ಮೊದಲು ಸಮಾಜ ಕಲ್ಯಾಣ ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಈಗ ಕೇಂದ್ರ ಸಚಿವರಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಭ್ರಮಾಚರಣೆಯಲ್ಲಿ ಬಿಜೆಪಿ ಉಪಾಧ್ಯಕ್ಷರಾದ ಚಂದ್ರಿಕಾ ಲೋಕನಾಥ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಭಾನುಮೂರ್ತಿ, ಮಾಧ್ಯಮ ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಶಂಭು, ಕಾರ್ತಿಕ್, ಪಲ್ಲವಿ ಪ್ರಸನ್ನಕುಮಾರ್, ಎನ್.ಕೃಷ್ಣ, ಸೋಮಶೇಖರ್, ರಜನಿ, ಲೇಪಾಕ್ಷಿ, ಕವನ, ಭಾರ್ಗವಿ, ಪ್ರದೀಪ್, ಚಂದ್ರು, ನಗರಸಭೆ ಸದಸ್ಯರಾದ ಹರೀಶ್, ಜಯಣ್ಣ, ನಾಗರಾಜ್ ಮತ್ತಿತರ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!